ಜೇವರ್ಗಿ:- ಜೇವರ್ಗಿಯ ಸುಪ್ರಸಿದ್ಧ ಆರಾಧ್ಯ ದೇವತೆಯಾದ ಶ್ರೀ ಕಲ್ಕತ್ತಾದೇವಿ (ಶ್ರೀ ಮಹಾಲಕ್ಷ್ಮೀ ದೇವಿ) ಜಾತ್ರಾ ಮಹೋತ್ಸವದ ಅಂಗವಾಗಿ, ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಡಾ. ಅಜಯ್ ಧರ್ಮಸಿಂಗ್ ಅವರು ಕುಟುಂಬ ಸಮೇತರಾಗಿ ದೇವಿಯ ದರ್ಶನ ಪಡೆದು ಭಕ್ತಿಭಾವದಿಂದ ವಿಶೇಷ ಪೂಜೆ ಸಲ್ಲಿಸಿದರು.
ದೇವಿಯ ಕೃಪಾಶೀರ್ವಾದ ಪಡೆದು, ನಾಡಿನ ಸಮಸ್ತ ಜನರ ಸುಖ, ಶಾಂತಿ, ಸಮೃದ್ಧಿ ಹಾಗೂ ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸಿದರು. ಬಳಿಕ ದೇವಿಯ ಪ್ರಥಮ ಪ್ರಮುಖ ರಥೋತ್ಸವದಲ್ಲಿ ಪಾಲ್ಗೊಂಡು, ರಥ ಎಳೆಯುವ ಮೂಲಕ ರಥೋತ್ಸವಕ್ಕೆ ವಿಧ್ಯುಕ್ತ ಚಾಲನೆ ನೀಡಿದರು.
ಈ ವಿಶೇಷ ಸಂದರ್ಭದಲ್ಲಿ ಧರ್ಮಸಿಂಗ್ ಫೌಂಡೇಶನ್ ವತಿಯಿಂದ ಭಕ್ತಾದಿಗಳಿಗೆ ಪ್ರಸಾದ ಸೇವೆ*ಯನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಅಲ್ಲದೆ, *ಹಾಲುಮತ ಸಮಾಜದ ಮುಖಂಡರ ಕಡೆಯಿಂದ ಭಕ್ತರಿಗೆ ಬಾನ ವಿತರಣೆ ಕಾರ್ಯಕ್ರಮವನ್ನು ಸಹ ನೆರವೇರಿಸಲಾಯಿತು.
“ರೈತರು, ಕಾರ್ಮಿಕರು ಸೇರಿದಂತೆ ಸಮಾಜದ ಪ್ರತಿಯೊಂದು ವರ್ಗದ ಜನರ ಬದುಕು ಹಸನಾಗಲಿ. ಎಲ್ಲರ ಜೀವನದಲ್ಲಿ ಸಂತೋಷ, ನೆಮ್ಮದಿ, ಸೌಹಾರ್ದತೆ ಮತ್ತು ಸಮೃದ್ಧಿ ನೆಲೆಸಲಿ ಎಂದು ಶ್ರೀ ದೇವಿಯಲ್ಲಿ ಭಕ್ತಿಪೂರ್ವಕವಾಗಿ ಪ್ರಾರ್ಥಿಸಿದ್ದೇನೆ,” ಎಂದು ಡಾ. ಅಜಯ್ ಧರ್ಮಸಿಂಗ್ ಹೇಳಿದರು.
ಜೇವರ್ಗಿ ಭಾಗದ ಧಾರ್ಮಿಕ ಮತ್ತು ಸಾಂಸ್ಕøತಿಕ ಪರಂಪರೆಯಲ್ಲಿ ಶ್ರೀ ಕಲ್ಕತ್ತಾದೇವಿ ಜಾತ್ರಾ ಮಹೋತ್ಸವಕ್ಕೆ ವಿಶಿಷ್ಟ ಸ್ಥಾನವಿದೆ. ಜನರನ್ನು ಒಂದೇ ಭಾವನೆಯಲ್ಲಿ ಒಗ್ಗೂಡಿಸುವ ಇಂತಹ ಜಾತ್ರೆಗಳು ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಸಾಮಾಜಿಕ ಸೌಹಾರ್ದತೆಯ ಪ್ರತೀಕವಾಗಿವೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು, ಸ್ಥಳೀಯ ಗಣ್ಯರು ಹಾಗೂ ಅಪಾರ ಸಂಖ್ಯೆಯ ಭಕ್ತಾದಿಗಳು ಉಪಸ್ಥಿತರಿದ್ದು, ದೇವಿಯ ದರ್ಶನ ಪಡೆದು ರಥೋತ್ಸವದಲ್ಲಿ ಭಾಗವಹಿಸಿದರು.
Recent Posts
ಶಾಸಕ ದರ್ಶನ್ ಧ್ರುವನಾರಾಯಣ್ ಜೊತೆ ಡಾ. ಶ್ರೀನಿಧಿ ಎಂಗೇಜ್ಮೆಂಟ್
November 2, 2026
No Comments

ದೆಹಲಿಯಲ್ಲಿ SIR ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ: 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ
November 1, 2026
No Comments

ಅಭಿಮಾನಿಗಳಿಗೆ ಶುಭಾಶಯ ಕೋರುವ ವೇಳೆ ಬುಲೆಟ್ಪ್ರೂಫ್ ಗಾಜಿನ ರಕ್ಷಣೆಯ ಹಿಂದೆ ಅಮಿತಾಭ್ ಬಚ್ಚನ್!
November 1, 2026
No Comments
ಸಣ್ಣ ನೀರಾವರಿ ಸಚಿವ ಡಾ. ಅಜಯ್ ಧರ್ಮಸಿಂಗ್ ಕುಟುಂಬ ಸಮೇತರಾಗಿ ಕಲ್ಕತ್ತಾದೇವಿಗೆ ವಿಶೇಷ ಪೂಜೆ ಸಲ್ಲಿಸಿದ
November 1, 2026
No Comments
ಬಾಲಕ ಮೃತ್ಯು ಬೀದಿ ನಾಯಿ ದಾಳಿಗೆ
November 1, 2026
No Comments

